ಬೆಂಗಳೂರು: ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ 30, ಕನಿಷ್ಠ 21 ಡಿಗ್ರಿ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಿಗ್ಗೆ ಮಂಜು, ಮಧ್ಯಾಹ್ನ ಬಿಸಿಲು-ಮೋಡದ ಆಟದ ವಾತಾವರಣವಿದ್ದು, ಸಂಜೆ ವೇಳೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಆರ್ದ್ರತೆ ಶೇ.60ರಿಂದ 75ರವರೆಗೆ ಇರಲಿದೆ.

ವಾಹನ ಸವಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಪಾಲಿಕೆ ಕ್ರಮ ಕೈಗೊಂಡಿದೆ.

ಮುಂದಿನ ಎರಡು ದಿನಗಳೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.